ಬೆಳಗಾವಿ : ಗಣೇಶ ವಿಸರ್ಜನೆ ವೇಳೆ ಯುವಕನ ಬರ್ಬರ ಹತ್ಯೆ
ಯರಗಟ್ಟಿ : ಗಣೇಶ ಚತುರ್ಥಿ ಹಿನ್ನಲೆಯಲ್ಲಿ ನಡೆಯುತ್ತಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ಒಬ್ಬ ಯುವಕನನ್ನು ಬಲಿತಗೆದುಕೊಂಡಿದೆ.
ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಪದವಿ ವ್ಯಾಸಂಗ ಮಾಡುತ್ತಿದ್ದ ಅರ್ಜುನಗೌಡ ಪಾಟೀಲ್ ( 20 ) ಯುವಕ ಕೊಲೆಯಾಗಿದ್ದಾನೆ.
ಹನ್ನೊಂದನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ ಅತ್ಯಂತ ಸಡಗರದಿಂದ ನಡೆಯುತ್ತಿತ್ತು ಈ ಸಂದರ್ಭದಲ್ಲಿ ಯುವಕ ಅರ್ಜುನಗೌಡ ಪಾಟೀಲ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸ್ಥಳದಲ್ಲೇ ಕುಸಿದು ಬಿದ್ದು ಯುವಕ ಸಾವಣಪ್ಪಿದ್ದಾನೆ. ಇನ್ನೂ ಘಟನೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಪ್ರೀತಿ ವಿಷಯದಲ್ಲಿ ನಡೆದ ಗಲಾಟೆಯಾ ಅಥವಾ ವೈಯಕ್ತಿಕ ದ್ವೇಷವಿತ್ತಾ ಎಂಬುದು ಇನ್ನಷ್ಟೇ ತಿಳಿದುಬರಬೇಕು.
ಇನ್ನೂ ಈ ಘಟನೆ ಕುರಿತಾಗಿ ಯರಗಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಳಾಗಿದೆ. ಈಗಾಗಲೇ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.