ಪಾರ್ಟಿ ಮಾಡುವ ವೇಳೆ ಯುವಕನ ಬರ್ಬರ ಹತ್ಯೆ
ಯರಗಟ್ಟಿ : ಪಾರ್ಟಿ ಮಾಡುತ್ತಿದ್ದ ವೇಳೆ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ.
ವಿನೋದ್ ಮಲಶೆಟ್ಟಿ (30) ಕೊಲೆಯಾದ ದುರ್ದೈವಿ. ಭಾನುವಾರ ರಾತ್ರಿ ನಗರದ ಹೊರವಲಯದಲ್ಲಿ ತೋಟದಲ್ಲಿ ಪಾರ್ಟಿ ಮಾಡುವ ವೇಳೆ ದುರುಳರು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿನೀಡಿದ್ದು ತನಿಖೆ ಮುಂದುವರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲ ಆರೋಪಿಗಳನ್ನು ಬಂಧಿಸಿದ್ದಾಗಿ ವರದಿಯಾಗಿದೆ.


