ಸವದತ್ತಿ : ಹಾಸ್ಟೆಲ್ ನಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು
ಯರಗಟ್ಟಿ : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಯರಗಟ್ಟಿಯ ತಲ್ಲೂರ ಗ್ರಾಮದ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಗಣೇಶ ಸೋಮಪ್ಪ ಪೂಜೇರ ( 15 ) ತಲ್ಲೂರಿನ ಬಸವೇಶ್ವರ ಯುವಕ ಮಂಡಳ ಪ್ರೌಢ ಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.
ಆಟ ಆಡುತ್ತಾ ಮೇಲ್ಛಾವಣಿ ಮೇಲೆ ತೆರಳಿದ ವಿದ್ಯಾರ್ಥಿ ವಿದ್ಯುತ್ ತಂತಿ ಹಿಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ವಿದ್ಯಾರ್ಥಿ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಡಿ ನೀಡಿ ಪರಶೀಲನೆ ನಡಿಸಿದ್ದು, ಯರಗಟ್ಟಿ ಉಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.