
ಯತ್ನಾಳ್ ಗೆ ನೋಟಿಸ್ ; ಉಚ್ಚಾಟನೆ ಆಗ್ತಾರಾ ರೆಬೆಲ್ ನಾಯಕ…?

ಬೆಂಗಳೂರು : ರಾಜ್ಯ ಬಿಜೆಪಿ ಒಳಜಗಳ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು ಕೊನೆಗೂ ಬಿಜೆಪಿ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ನೀಡಿದೆ.
ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದ್ದು ಕೇವಲ 72 ಗಂಟೆಯಲ್ಲಿ ಉತ್ತರಿಸುವಂತೆ ತಿಳಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದ ಉತ್ನಾಳ್ ಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ ರವಾನಿಸಿದೆ.
ವಿಜಯೇಂದ್ರ ಅವರನ್ನೇ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರನ್ನಾಗಿ ಮುಂದುವರಿಸುವ ಸಾಧ್ಯತೆ ಇದ್ದು ಯತ್ನಾಳ್ ಅವರ ಹೇಳಕೆಗೆ ಮೂಗುದಾರ ಹಾಕುವ ಉದ್ದೇಶದಿಂದ ಹೈಕಮಾಂಡ್ ಕೊನೆಗೂ ನೋಟಿಸ್ ನೀಡಿದೆ.
ದೆಹಲಿಗೆ ತೆರಳಿದ್ದ ಯತ್ನಾಳ್ ಸಧ್ಯ ಹೈದರಾಬಾದ್ ಗೆ ಬಂದಿದ್ದಾರೆ. ನೋಟಿಸ್ ವಿಚಾರವಾಗಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕು.