ವಿಜಯಪುರ : ನಗರ ವಿಧಾನಸಭಾ ‌ಕ್ಷೇತ್ರದ ಚುನಾವಣಾ ‌ಅಕ್ರಮ ಆರೋಪ‌ ‌ಪ್ರಕರಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ‌ ಜಯ ಸಿಕ್ಕಿದೆ.

ಉತ್ನಾಳ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮುಶ್ರೀಫ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿದಿದೆ.

ಸುಪ್ರೀಂ ನೀಡಿರುವ ತೀರ್ಪನ್ನು ಯತ್ನಾಳ್ ಸ್ವಾಗತಿಸಿದ್ದಾರೆ. ತಮ್ಮ ಜೊತೆ ನಿಂತ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ.