ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ – ಯತ್ನಾಳ್
ಬೆಳಗಾವಿ : ಹಿಂದೂಗಳಿಗೆ ಇರುವುದು ಭಾರತ ಒಂದೇ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಮದರಸಾಗಳನ್ನು ಬಂದ್ ಮಾಡಲಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಶಿವಚರಿತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಇವರು.
ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ರೀತಿ ಕರ್ನಾಟಕದಲ್ಲಿ ಮದರಸಾ ಬಂದ್ ಮಾಡುತ್ತೇವೆ. ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿಯಲು ಶಿವಾಜಿ ಮಹಾರಾಜರು ಕಾರಣರಾಗಿದ್ದಾರೆ. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್, ಅಜರುದ್ದೀನ್ ಪಟೇಲ್ ಆಗಿ ಇರುತ್ತಿದ್ದರು ಎಂದರು.
ಅಸ್ಸಾಂ ಹಿಂದೂಸ್ತಾನ ಬಿಟ್ಟು ಹೋಗುವ ವಾತಾವರಣ ಇತ್ತು. ಆದರೆ ಹಿಮಂತ ಬಿಸ್ವಾ ಶರ್ಮಾರಿಂದ ಅಸ್ಸಾಂನಲ್ಲಿ ಹಿಂದೂಗಳು ಜೀವನ ಮಾಡಲು ಸಾಧ್ಯವಾಯಿತು ಎಂದ ಅವರು, ನನಗೊಬ್ಬರು ಶಿವಾಜಿ ಮಹಾರಾಜರ ಬಗ್ಗೆ ಮಾತನಾಡುತ್ತೀಯಾ ಅವರಿಗೆ ಹುಟ್ಟಿದಿಯಾ ಎಂದು ಹೇಳಿದ್ದರು. ಹೌದು ನಾನು ಶಿವಾಜಿ ಸಂತಾನವಾಗಿದ್ದು, ಟಿಪ್ಪು ಸುಲ್ತಾನನ ಸಂತನಾವಲ್ಲ ಎಂದು ಹೇಳಿದರು.
ಮುಸ್ಲಿಂ ರಾಜರ ಬಗ್ಗೆ ಹಲವರು ವರ್ಣನೆ ಮಾಡುತ್ತಾರೆ. ಆದರೆ ಮಂತಾತರ ಮತ್ತು ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಅವರಿಂದಲೇ ಆಯಿತು. ಯಾವ ಹಿಂದೂ ರಾಜರಿಂದ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿಲ್ಲ.
ಬೆಳವಡಿ ಮಲ್ಲಮ್ಮ ತಂಗಿ ಅಂತಾ ಸ್ವೀಕಾರ ಮಾಡಿ ಅವರ ಬಳಿ ರಾಖಿ ಕಟ್ಟಿಸಿಕೊಂಡ ಇತಿಹಾಸ ಬೆಳಗಾವಿಯಲ್ಲಿದೆ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇರಬೇಕು. ಭಾಷೆಯನ್ನು ಮೀರಿ ಹಿಂದುತ್ವಕ್ಕಾಗಿ ಬದುಕಬೇಕು ಎಂದರು. ಈ ಸಂದರ್ಭದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ, ಶಾಸಕ ಅಭಯ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.