ಅಯೋಧ್ಯೆ ಸರಯೂ ನದಿ ದಡದಲ್ಲಿ ಸಂಪುಟ ಸಭೆ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್
ಲಖನೌ : ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲ ಬಾರಿಗೆ ಅಯೋಧ್ಯೆ ಸರಯು ನದಿದಂಡೆಯಲ್ಲಿ ಮಂತ್ರಿಮಂಡಳದ ಸಚಿವಸಂಪುಟ ಸಭೆ ನಡೆಸಿದ್ದಾರೆ.
ಬರುವ ಜನವರಿಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ಸಕಲ ಸಿದ್ದತೆ ಮಾಡಿಕೊಂಡಿದೆ. ಜೊತೆಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಸರಯೂ ನದಿ ದಂಡೆಯಲ್ಲಿ ಇರುವ ರಾಮಕಥಾ ಮಂಟಪದಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಹಾಜರಿದ್ದ ಪ್ರತಿಯೊಬ್ಬ ಸಚಿವರು ಶ್ರೀ ಸೀತಾ ರಾಮ್ ಹೆಸರಿನ ಶಾಲುಗಳನ್ನು ಧರಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ವಸ್ತು ಸಂಗ್ರಹಾಲಯ ನಿರ್ಮಾಣದ ಕುರಿತು ರಾಮ ಮಂದಿರದ ಅಭಿವೃದ್ಧಿ ಕಾಮಗಾರಿ ಬಗ್ಗೆ ಅನುಮೋದನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿರುವ ಸಿಎಂ ಯೋಗಿ ಆದಿತ್ಯನಾಥ್ ಅವರು. ಉತ್ತರ ಪ್ರದೇಶದ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲಬಾರಿಗೆ ಅಯೋಧ್ಯೆ ನಗರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಹಲವಾರು ಅಭಿವೃದ್ಧಿ ಕಾಮಗಾರಿ ಕುರಿತು ಅನುಮೋದನೆ ನೀಡಲಾಗಿದೆ ಎಂದರು.


